ರಾಜ್ಯದ ಅನರ್ಹ BPL ಕಾರ್ಡ್‌ಧಾರರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ !

By Koushikgk

Published on:

Spread the love
WhatsApp Group Join Now
Telegram Group Join Now
Instagram Group Join Now

BPL Card – ರಾಜ್ಯದ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಬಿಪಿಎಲ್ (BPL) ಕಾರ್ಡ್‌ಗಳಿಂದ ಎಪಿಎಲ್ (APL) ಕಾರ್ಡ್‌ಗಳಿಗೆ ವರ್ಗಾಯಿಸುವ ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಸದಸ್ಯ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವು ವರ್ಷಗಳಿಂದ ಇದ್ದ ತಾಂತ್ರಿಕ ದೋಷಗಳನ್ನು ಸರಿಪಡಿಸಿರುವುದರಿಂದ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆ ಇಲ್ಲವೆಂದರು. ಕಪ್ಪು ಮಾರುಕಟ್ಟೆ ಹಾಗೂ ಇತರ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ 409 ಪ್ರಕರಣಗಳನ್ನು ದಾಖಲಿಸಿದ್ದು, ₹20 ಕೋಟಿಗೂ ಹೆಚ್ಚು ದಂಡ ವಿಧಿಸಿ, ಈಗಾಗಲೇ ₹10 ಕೋಟಿ ವಸೂಲಿ ಮಾಡಲಾಗಿದೆ ಎಂದು ವಿವರಿಸಿದರು.

📢 Stay Updated! Join our WhatsApp Channel Now →

ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ಕರ್ನಾಟಕದಲ್ಲಿದ್ದು, ರಾಜ್ಯದ 75-80% ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ತಮಿಳುನಾಡಿನಲ್ಲಿ 50%, ಕೇರಳದಲ್ಲಿ 45%, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ತಲಾ 50% ಬಿಪಿಎಲ್ ಕಾರ್ಡ್‌ಗಳಿವೆ ಎಂದು ಸಚಿವರು ತಿಳಿಸಿದರು.

ಕಳೆದ ವಿಧಾನಸಭಾ ಅಧಿವೇಶನದ ಮೊದಲು 15 ಲಕ್ಷ ಕಾರ್ಡ್‌ಗಳನ್ನು ಪರಿಶೀಲಿಸಿದಾಗ, 50-60 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಆದರೆ ಕೆಲವು ಅಡೆತಡೆಗಳಿಂದ ಆ ಕಾರ್ಯ ನಿಂತುಹೋಯಿತು ಎಂದು ವಿಷಾದ ವ್ಯಕ್ತಪಡಿಸಿದರು.

ಈ ಬಾರಿ ಕೇಂದ್ರದ 12 ಹಾಗೂ ರಾಜ್ಯದ 5 ಮಾನದಂಡಗಳ ಆಧಾರದ ಮೇಲೆ ಪರಿಶೀಲನೆ ಮುಂದುವರಿಸಲಾಗುವುದು. ಅನರ್ಹರನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾಯಿಸಿ, ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಒದಗಿಸುವುದೇ ಉದ್ದೇಶ ಎಂದು ಸಚಿವರು ಸ್ಪಷ್ಟಪಡಿಸಿದರು.

Read More :Rain Alert : ಕರ್ನಾಟಕದ 17 ಜಿಲ್ಲೆಯಲ್ಲಿ ಭಾರೀ ಮಳೆ — ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿ

Leave a Comment