ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ – ಶಾಲೆಗಳಿಗೆ ರಜೆ ಸಾಧ್ಯತೆ

By Koushikgk

Published on:

Spread the love
WhatsApp Group Join Now
Telegram Group Join Now
Instagram Group Join Now

Karnataka Rain:ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಅನೇಕ ಕೆರೆ-ಕಟ್ಟೆಗಳು ಮತ್ತು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ರಣಮಳೆಯ ಮುನ್ಸೂಚನೆ ನೀಡಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗಿನ ಜಾವ ಮಳೆಯಿಲ್ಲದಿದ್ದರೂ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಬೆಂಗಳೂರು ಸೇರಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

📢 Stay Updated! Join our WhatsApp Channel Now →

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಜೊತೆಗೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮುಂದಿನ ಆ.22ರಿಂದ 26ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ವಾತಾವರಣ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ವೇಳೆ, ಭಾರೀ ಮಳೆಯಿಂದಾಗಿ ಹಲವೆಡೆ ಶಾಲಾ-ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಮಳೆ ಮುಂದುವರೆದರೆ, ರಜೆ ದಿನಗಳನ್ನು ವಿಸ್ತರಿಸುವ ಸಾಧ್ಯತೆಗಳಿದ್ದು, ತೀರ್ಮಾನವನ್ನು ಪ್ರತಿ ಜಿಲ್ಲೆಯ ಜಿಲ್ಲಾಡಳಿತವು ಪರಿಸ್ಥಿತಿ ಪರಿಗಣಿಸಿ ತೆಗೆದುಕೊಳ್ಳಲಿದೆ ಎಂದು ವರದಿ ತಿಳಿಸಿದೆ. ವಿದ್ಯಾರ್ಥಿಗಳ ಪಾಠ್ಯಕ್ರಮ ಹಿಂದುಳಿಯದಂತೆ ನಂತರ ಈ ರಜೆಗಳನ್ನು ಸರಿದೂಗಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಹೀಗಾಗಿ, ಕರ್ನಾಟಕದ ಹಲವೆಡೆ ಮುಂದಿನ ದಿನಗಳಲ್ಲಿ ಮೋಡ ಕವಿದ ಹವಾಮಾನ ಹಾಗೂ ಸಾಧಾರಣದಿಂದ ಭಾರೀ ಮಳೆ ಮುಂದುವರಿಯಲಿದೆ. ಜನರು ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Leave a Comment